- Advertisement -
- Advertisement -



ಬಳ್ಳಾರಿ: ಖಾಸಗಿ ಶಾಲೆಯ ಹಾಸ್ಟೆಲ್‌ವೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯು ರಾಡ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, 7 ಮಕ್ಕಳಿಗೆ ಗಾಯವಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಮೃತ ಬಾಲಕನ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ. ಡ್ರಗ್ ಅಡಿಕ್ಟ್ ಆಗಿ ಕೊಲೆ ಮಾಡಿರಬಹುದು ಎಂದು ಮೃತ ಬಾಲಕನ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.
ಬಳ್ಳಾರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
- Advertisement -








