Wednesday, June 17, 2026
spot_imgspot_img
spot_imgspot_img

ಸಿಡಿಲು ಬಡಿದು ಬಾಲಕ ಸಾವು..!

- Advertisement -
- Advertisement -

ಹುಬ್ಬಳ್ಳಿ: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಸಿಡಿಲು ಬಡಿದು ಮೃತಪಟ್ಟ ಬಾಲಕ ತಾರಿಹಾಳ ಗ್ರಾಮದ ಅರುಣ್ ಚುರುಮುರಿ(17) ಎಂದು ಗುರುತಿಸಲಾಗಿದೆ.

ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ದನ ಮೇಯಿಸಲು ತೆರಳಿದ್ದ ಅರುಣ್ ಸಿಡಿಲು ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!