- Advertisement -
- Advertisement -




ಬೆಂಗಳೂರು: ಲಿಫ್ಟ್ ಕಾಮಗಾರಿಗೆಂದು ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಡೆದಿದೆ.
ಮೃತ ಬಾಲಕನನ್ನು ಸುಹಾಸ್ ಗೌಡ (5) ಎಂದು ಗುರುತಿಸಲಾಗಿದೆ.
ಕನ್ನಮಂಗಲದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಸಲಾಗುತ್ತಿತ್ತು. ಈ ಹಿನ್ನೆಲೆ ಕಟ್ಟಡದಲ್ಲಿ ಲಿಫ್ಟ್‌ಗೆಂದು 5 ಅಡಿ ಗುಂಡಿ ತೋಡಲಾಗಿತ್ತು. ಭಾರೀ ಮಳೆಯ ಪರಿಣಾಮ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರೂ ಸಿಬ್ಬಂದಿ ಯಾವುದೇ ಮುನ್ನೆಚ್ಚರಿಕೆ ವಹಿಸಿರಲಿಲ್ಲ.
ಸುಹಾಸ್ ಮನೆ ಮುಂಭಾಗ ಆಟವಾಡುವ ವೇಳೆ ಆಯತಪ್ಪಿ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಪ್ರಕರಣದ ಕುರಿತು ಮಿಲ್ಕ್ ಡೈರಿ ಅಧ್ಯಕ್ಷನ ಮೇಲೆ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








