Saturday, June 28, 2025
spot_imgspot_img
spot_imgspot_img

ಜೋಕಾಲಿ ಹಗ್ಗ ಕುತ್ತಿಗೆ ಸಿಲುಕಿ ಬಾಲಕ ಮೃತ್ಯು..!

- Advertisement -
- Advertisement -

ಬಾಲಕನೋರ್ವ ಜೋಕಾಲಿ ಆಡುವಾಗ ಅದರ ಹಗ್ಗಕ್ಕೆ ಕುತ್ತಿಗೆ ಸಿಲುಕಿ ಮೃತಪಟ್ಟ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಸವಳಂಗದಲ್ಲಿ ನಡೆದಿದೆ.

ಮೃತಪಟ್ಟ ಬಾಲಕ ಪಿ.ಜೆ ಕೊಟ್ರೇಶ್ (14) ಎಂದು ಗುರುತಿಸಲಾಗಿದೆ.

ಈ ಬಾಲಕ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು. ಕೊಟ್ರೇಶ್ ಶಾಲೆ ಮುಗಿಸಿ ಬಂದು ಮನೆಯಲ್ಲಿ ಜೋಕಾಲಿಯಲ್ಲಿ ಕುಳಿತು ಆಟವಾಡುತ್ತಿದ್ದನು. ಹೀಗೆ ಆಟವಾಡುತ್ತಿದ್ದ ಸಂದರ್ಭ ಜೋಕಾಲಿ ಹಗ್ಗವು ಆಕಸ್ಮಿಕವಾಗಿ ಬಾಲಕನ ಕೊರಳಿಗೆ ಸುತ್ತಿಕೊಂಡಿದೆ. ಪರಿಣಾಮ ಹಗ್ಗ ಬಿಗಿಯಾಗಿ ಬಾಲಕನಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!