Monday, June 8, 2026
spot_imgspot_img
spot_imgspot_img

ಟೆರೇಸ್‌ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

- Advertisement -
- Advertisement -

ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ತನಿಷ್ (11) ಮೃತಪಟ್ಟಿರುವ ಘಟನೆ ಹೈದರಾಬಾದ್ ನ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ.

ತನಿಷ್ಕ್‌ (11) ಮೃತ ಬಾಲಕ. ತಮ್ಮ ಮನೆಯ ಮಹಡಿ ಮೇಲೆ ನಿಂತು ಗಾಳಿ ಪಟ ಹಾರಿಸುವ ವೇಳೆ ಗಾಳಿ ಪಟದ ದಾರ ವಿದ್ಯುತ್ ತಂತಿಗೆ ಸಿಲುಕಿಕೊಂಡಿದೆ. ಅದನ್ನು ಬಿಡಿಸಲು ಹೋದಾಗ ದೇಹಕ್ಕೆ ವಿದ್ಯುತ್ ಪ್ರವಹಿಸಿದೆ. ತಕ್ಷಣ ಬಾಲಕ ಕಿರುಚಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ. ಪೋಷಕರ ರೋದನ ಮುಗಿಳುಮುಟ್ಟಿದ್ದು, ಮಕ್ಕಳ ಚಲನವಲನ ಬಗ್ಗೆ ಹೆಚ್ಚಿನ ನಿಗಾ ಅಗತ್ಯ ಎಂದು ಪೊಲೀಸರು ನಾಗರಿಕರಿಗೆ ಸಲಹೆ ನೀಡಿದ್ದಾರೆ.

ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತಪಟ್ಟಿರುವುದು ಹಬ್ಬದ ಮನೆಯಲ್ಲಿ ಸೂತಕದ ವಾತಾವಾರಣಕ್ಕೆ ಕಾರಣವಾಗಿದೆ.

- Advertisement -

Related news

error: Content is protected !!