Tuesday, June 23, 2026
spot_imgspot_img
spot_imgspot_img

ಲಾರಿಗೆ ಕಾರು ಡಿಕ್ಕಿ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ..!

- Advertisement -
- Advertisement -

ರಸ್ತೆ ಮಧ್ಯೆ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತಿಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಹಾಸನದ ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆ ವಳಿ ನಡೆದಿದೆ.

ಮೃತಪಟ್ಟವರನ್ನು ಪ್ರದೀಪ್ (30), ಗುರು (25) ಎಂದು ಗುರುತಿಸಲಾಗಿದೆ.

ರಸ್ತೆ ಮಧ್ಯೆ ಟೈಯರ್ ಪಂಕ್ಚರ್ ಆಗಿ ಟಿಂಬರ್ ತುಂಬಿದ್ದ ಲಾರಿಯೊಂದು ನಿಂತಿತ್ತು. ದಟ್ಟ ಮಂಜು ಆವರಿಸಿದ್ದರಿಂದ ಲಾರಿ ನಿಂತಿರುವುದು ಕಾರು ಚಾಲಕನ ಗಮನಕ್ಕೆ ಬಂದಿರಲಿಲ್ಲ. ವೇಗವಾಗಿ ಬಂದ ಕಾರು ಹಿಂದಿನಿಂದ ಲಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತಿಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರಿನ ಟಾಪ್ ಸಂಪೂರ್ಣ ಕಿತ್ತು ಹೋಗಿದದೆ. ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಆಲೂರು ಠಾಣೆ ಪೊಲೀಸರು ಅಪಘಾತಕ್ಕೀಡಾದ ವಾಹನವನ್ನು ವಶಕ್ಕೆ ಪಡೆದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

- Advertisement -

Related news

error: Content is protected !!