Monday, August 17, 2026
spot_imgspot_img
spot_imgspot_img

ಕಾರು-ಲಾರಿ ನಡುವೆ ಭೀಕರ ಅಪಘಾತ; ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು, ಚಾಲಕ ಗಂಭೀರ..!

- Advertisement -
- Advertisement -

ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು ಚಾಲಕ ಗಂಭೀರ ಗಾಯಗೊಂಡ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಗಳನ್ನು ವಿಶ್ವ (21) ಮತ್ತು ಸೂರ್ಯ (21) ಹಾಗೂ ಗಂಭೀರ ಗಾಯಗೊಂಡ ಚಾಲಕ ಸುಹಾಸ್ ಎಂದು ಗುರುತಿಸಲಾಗಿದೆ.

ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು ಚಾಲಕ ಸುಹಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ. ’

ಆಂಧ್ರ ಮೂಲದ ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವ ಸಂದರ್ಭ ದುರ್ಘಟನೆ ಸಂಭವಿಸಿದದೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

- Advertisement -

Related news

error: Content is protected !!