Wednesday, May 15, 2024
spot_imgspot_img
spot_imgspot_img

ಬಿ.ಸಿ ರೋಡು: ಪಾದಚಾರಿ ಯುವತಿಗೆ ಕಾರು ಡಿಕ್ಕಿ – ಯುವತಿ ಗಂಭೀರ

- Advertisement -G L Acharya panikkar
- Advertisement -

ಬಿ.ಸಿ ರೋಡು: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾದ ಘಟನೆ ಬಿಸಿರೋಡ್ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ಗುರುವಾರ ರಾತ್ರಿ 9 ಗಂಟೆ ವೇಳೆ ನಡೆದಿದೆ.

ಗಾಯಗೊಂಡ ಯುವತಿಯನ್ನು ಸ್ಥಳೀಯ ‌ನಿವಾಸಿ ಚೈತ್ರ (22 ) ಎಂದು ಗುರುತಿಸಲಾಗಿದೆ. ಚೈತ್ರಳಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಅವರು ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ ಜೊತೆಗೆ ಮನೆಯ ಕಡೆಯ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ.

ತಾಯಿ ಜೊತೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಸ್ವಿಪ್ಟ್ ಕಾರು ಡಿಕ್ಕಿಯಾಗಿದ್ದ, ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ‌ಇದೇ ಸಂದರ್ಭದಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಟ್ರಾಫಿಕ್ ‌ಪೋಲೀಸರು ಅವರ ಖಾಸಗಿ ವಾಹನದ ಮೂಲಕ ಗಾಯಳು ಚೈತ್ರಳನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಈಕೆ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪಾದಾಚಾರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ನಿಯಂತ್ರಣ ಕಳೆದುಕೊಂಡು ಅಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದು ನಿಂತಿದ್ದು, ಕಾರು ಚಾಲಕ ಹಾಗೂ ಹಾಗೂ ಸಹ ಪ್ರಯಾಣಿಕ ಪರಾರಿಯಾಗಿದ್ದಾರೆ.ಗಾಂಜಾ ಸೇವನೆ ಮಾಡಿ ಕಾರು ಚಾಲನೆ ಮಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಲ್ಲದೆ, ಕಾರಿನ ಡಯಾಸ್ ನೊಳಗೆ ಗಾಂಜಾ ಸಿಕ್ಕಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಪೋಲಿಸರು ಸ್ಥಳಕ್ಕೆ ಬೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!