Sunday, June 21, 2026
spot_imgspot_img
spot_imgspot_img

ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ; ನಾಲ್ವರು ಸಾವು..!

- Advertisement -
- Advertisement -

ಕಾರೊಂದು ನಿಂತಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಹುಬ್ಬಳ್ಳಿ ಸೊಲ್ಹಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಎಂದು ಗುರುತಿಸಲಾಗಿದೆ.

ಬೆಳಗಿ‌ನ ಜಾವ 4 ಗಂಟೆಗೆ ಅವಘಡ ನಡೆದಿದ್ದು, ಮೃತರು ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮೃತ ನಾಲ್ವರು ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರ ಎಂದು ಪತ್ತೆಹಚ್ಚಲಾಗಿದೆ. ಸ್ಥಳಕ್ಕೆ ಬೀಳಗಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ.

- Advertisement -

Related news

error: Content is protected !!