Sunday, July 26, 2026
spot_imgspot_img
spot_imgspot_img

ಬಿಸಿ ರೋಡು: ಪಾದಚಾರಿ ಯುವತಿಗೆ ಕಾರು ಡಿಕ್ಕಿ – ಗಂಭೀರ ಗಾಯಗೊಂಡ ಯುವತಿ ನಿಧನ

- Advertisement -
- Advertisement -

ಬಿಸಿ ರೋಡು: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾದ ಘಟನೆ ಬಿಸಿರೋಡ್ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ಗುರುವಾರ ರಾತ್ರಿ 9 ಗಂಟೆ ವೇಳೆ ನಡೆದಿದ್ದು,ಗಾಯಗೊಂಡ ಯುವತಿಯನ್ನು ಸ್ಥಳೀಯ ‌ನಿವಾಸಿ ಚೈತ್ರ (22 ) ಎಂದು ಹೆಸರಿಸಲಾಗಿದೆ.

ತಾಯಿ ಜೊತೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಸ್ವಿಪ್ಟ್ ಕಾರು ಇವಳಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರವಾಗಿ ಗಾಯಗೊಂಡಿದ್ದು,ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಬಂದ ಮಾಹಿತಿ ಪ್ರಕಾರ ಚೈತ್ರರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಮೃತರ ಅಂತ್ಯಸಂಸ್ಕಾರ ಇಂದು ಪೂರ್ವಾಹ್ನ 11 ಗಂಟೆಗೆ ಪಚ್ಚಿನಡ್ಕದ ಸ್ವಗ್ರಹದಲ್ಲಿ ನಡೆಯಲಿದ್ದು, ಅಮ್ಟಾಡಿ ಹಿಂದೂರುದ್ರಭೂಮಿಯಲ್ಲಿ ಅಂತಿಮಕ್ರಿಯೆ ನಡೆಯಲಿದೆ.

- Advertisement -

Related news

error: Content is protected !!