Sunday, June 7, 2026
spot_imgspot_img
spot_imgspot_img

ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ವ್ಯಕ್ತಿ ಸಾವು..!

- Advertisement -
- Advertisement -

ಮದುವೆ ಸಮಾರಂಭಕ್ಕೆ ಫೋಟೋಗ್ರಫಿ ಮಾಡಲು ತೆರಳಿದ್ದ ಫೋಟೋಗ್ರಾಫರ್‌ರೊಬ್ಬರು ಮರಳಿ ಬರುವಾಗ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮ್ಮನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಚಳ್ಳಕೆರೆ ನಗರದ ಚಿತ್ರಯ್ಯನಹಟ್ಟಿಯ ಫೋಟೋಗ್ರಾಫರ್ ಅಭಿಷೇಕ್ (30) ಎಂದು ಗುರುತಿಸಲಾಗಿದೆ.

ಈತ ಮೊಳಕಾಲ್ಮೂರು ತಾಲೂಕಿನ ರಾಯದುರ್ಗದಲ್ಲಿ ನಡೆದ ವಿವಾಹ ಕಾರ್ಯಕ್ರಮವೊಂದಕ್ಕೆ ಫೋಟೋ ತೆಗೆಯಲು ಹೋಗಿ ಮರಳಿ ನಗರಕ್ಕೆ ಕಾರಿನಲ್ಲಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

- Advertisement -

Related news

error: Content is protected !!