Sunday, May 5, 2024
spot_imgspot_img
spot_imgspot_img

ಮಂಗಳೂರು: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಮಹಿಳೆಗೆ ಡಿಕ್ಕಿ: ಮಹಿಳೆ ಗಂಭೀರ

- Advertisement -G L Acharya panikkar
- Advertisement -

ಮಂಗಳೂರು: ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಮಹಿಳೆಯೋರ್ವರಿಗೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಈ ಘಟನೆ ನಡೆದಿದೆ.

ಮೂಡುಶೆಡ್ಡೆ ನಿವಾಸಿ ಮಮತಾ ಗಾಯಗೊಂಡ ಮಹಿಳೆ ಎಂದು ಗುರುತಿಸಲಾಗಿದೆ.

ಮಮತಾ ಅವರು ಪ್ರತಿನಿತ್ಯದಂತೆ ಕೆಲಸಕ್ಕೆ ಹೋಗಲು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಕಾರು ಅವರಿಗೆ ಡಿಕ್ಕಿ ಹೊಡೆದಿದೆನ್ನಲಾಗಿದೆ. ಅಪಘಾತಕ್ಕೀಡಾದ ಕಾರನ್ನು 9ನೇ ತರಗತಿಯ ಬಾಲಕ ಚಾಲನೆ ಮಾಡುತ್ತಿದ್ದುದಾಗಿ ಮಾಹಿತಿ ಲಭ್ಯವಾಗಿದ್ದು, ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಮಹಿಳೆಗೆ ಡಿಕ್ಕಿಯಾದ ಕಾರು ಸ್ವಲ್ಪ ದೂರ ಮಹಿಳೆಯನ್ನು ಎಳೆದುಕೊಂಡು ಹೋಗಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

Related news

error: Content is protected !!