Sunday, June 29, 2025
spot_imgspot_img
spot_imgspot_img

ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ; ನಾಲ್ವರು ಸಾವು..!

- Advertisement -
- Advertisement -

ಕರ್ನಾಟಕದಿಂದ ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನ ಅಪಘಾತಕ್ಕೀಡಾಗಿ, ನಾಲ್ವರು ಸಾವನ್ನಪ್ಪಿರುವ ಘಟನೆ ಘಟನೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಕರ್ಮಲಾ ತಾಲೂಕಿನ ಪಾಂಡೆ ಗ್ರಾಮದ ಬಳಿ ನಡೆದಿದೆ.

ಮೃತಪಟ್ಟವರನ್ನು ಕಲಬುರಗಿಯ ಶ್ರೀಶೈಲ ಚಂಡೇಶ ಕುಂಬಾರ (56) ಶಶಿಕಲಾ ಶ್ರೀಶೈಲ್ ಕುಂಬಾರ (50) ಬಾಗಲಕೋಟೆಯ ಜ್ಯೋತಿ ದೀಪಕ್​ ಹಿರೇಮಠ (38) ಹಾಗೂ ಗಾಯಗೊಂಡವರು ಹುಬ್ಬಳ್ಳಿಯ ಶಾರದಾ ದೀಪಕ್​ ಹಿರೇಮಠ (70) ಎಂದು ಗುರುತಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಕರ್ನಾಟಕದ ಕಲಬುರಗಿಯಿಂದ 8 ಮಂದಿ ಭಕ್ತರು ಶಿರಡಿ ಸಾಯಿಬಾಬಾ ದರ್ಶನಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಕರ್ಮಲ ತಾಲೂಕಿನ ಪಾಂಡೆ ಗ್ರಾಮದ ಬಳಿ ಕಾರು ತೆರಳುತ್ತಿದ್ದಾಗ ಎದುರಿಗೆ ಬಂದ ಕಂಟೈನರ್​ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಬೆಳ್ಳಂಬೆಳಗ್ಗೆ ನಡೆದ ಅಪಘಾತದ ದೊಡ್ಡ ಸದ್ದ ಕೇಳಿದ ಗ್ರಾಮದ ಕೆಲವರು ಸ್ಥಳಕ್ಕೆ ಧಾವಿಸಿ ಬಂದು ಕಾರಿನಲ್ಲಿ ಸಿಕ್ಕಿದ್ದವರನ್ನು ಹೊರತೆಗೆದಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಢ ನಿದ್ದೆಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಈ ಪೈಕಿ ತೀವ್ರ ಗಾಯಗೊಂಡಿದ್ದ ಶಾರದಾ ದೀಪಕ್​ ಎಂಬುವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುವಾಗ ಮೃತಪಟ್ಟಿದ್ದಾರೆ. 8 ಮಂದಿಯ ಪೈಕಿ ನಾಲ್ವರು ಸಾವಿಗೀಡಾದರೆ, 8 ತಿಂಗಳ ಹಸುಗೂಸು ಭೀಕರ ಅಪಘಾತದಲ್ಲಿ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದೆ. .8 ಮಂದಿಯ ಪೈಕಿ ನಾಲ್ವರು ಸಾವಿಗೀಡಾದರೆ, 8 ತಿಂಗಳ ಹಸುಗೂಸು ಭೀಕರ ಅಪಘಾತದಲ್ಲಿ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದೆ.

- Advertisement -

Related news

error: Content is protected !!