- Advertisement -
- Advertisement -



ಉಡುಪಿ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಮೃತಪಟ್ಟ ಕಾರು ಚಾಲಕ ನಾಗೇಶ್ (70) ಎಂದು ಗುರುತಿಸಲಾಗಿದೆ.
ಕಾಪುವಿನ ಮೆಸ್ಕಾಂ ಕಚೇರಿಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಅವರು, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಾಪು ಪಿ.ಎಸ್.ಐ. ಅಬ್ದುಲ್ ಖಾದರ್, ಕ್ರೈಂ ಪಿ.ಎಸ್.ಐ. ಪುರುಷೋತ್ತಮ್ ಹಾಗೂ ಸಿಬ್ಬಂದಿ ಮತ್ತು ಹೆದ್ದಾರಿ ಗಸ್ತು ಪಡೆಯವರು ತೆರಳಿ ಅಪಘಾತದಲ್ಲಿ ಸಿಲುಕಿದ್ದ ಕಾರು ಮತ್ತು ಲಾರಿಯನ್ನು ತೆರವುಗೊಳಿಸಿದರು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -