Monday, May 6, 2024
spot_imgspot_img
spot_imgspot_img

ಸುಳ್ಯ: ಹಿಂದೂ ಮಹಿಳೆಯನ್ನು ಕಾರಿನಲ್ಲಿ ಲಾಡ್ಜ್ ಗೆ ಕರೆದೊಯ್ದ ಮುಸ್ಲಿಂ ಕಾರು ಚಾಲಕನ ಮೇಲೆ ಹಲ್ಲೆ; ಐವರ ವಿರುದ್ಧ ಪ್ರಕರಣ ದಾಖಲು- ಸೊಣಂಗೇರಿ ಪುನೀತ್ ಪೊಲೀಸ್ ವಶಕ್ಕೆ..!!

- Advertisement -G L Acharya panikkar
- Advertisement -

ಸುಳ್ಯ: ತಡರಾತ್ರಿ ಸುಳ್ಯ ತಾಲೂಕಿನ ಅರಂತೋಡು ಸಮೀಪ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿರುವ ಯುವಕ ಸುಳ್ಯ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ದೂರು ನೀಡಿದ್ದು, ಓರ್ವ ಆರೋಪಿಯ ಬಂಧನವಾಗಿದೆ.

ಹಲ್ಲೆಗೊಳಗಾದ ಯುವಕ ಕೇರಳದ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್(39ವರ್ಷ) ಎಂದು ಗುರುತಿಸಲಾಗಿದೆ .ಸುಳ್ಯ ಸೊಣಂಗೇರಿ ನಿವಾಸಿ ಪುನೀತ್ ಬಂಧಿತ ಆರೋಪಿ

ತಾನು ಪ್ರಸ್ತುತ ಸುಳ್ಯ ತಾಲೂಕು ಅರಂತೋಡಿನಲ್ಲಿ ರಬ್ಬರ್ ತೋಟವನ್ನು ಕಳೆದ 3 ತಿಂಗಳ ಹಿಂದೆ ಗುತ್ತಿಗೆ ಪಡೆದು ಅರಂತೋಡಿನಲ್ಲಿ ವಾಸವಾಗಿದ್ದು, ಆ.12ರಂದು ತನ್ನ ಪರಿಚಯದ ಯುವತಿಯೋರ್ವಳು ತಾನು ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದು ತನಗೆ ವಿಶ್ರಾಂತಿ ಪಡೆಯಲು ರೂಮ್ ಬೇಕೆಂದು ಕೇಳಿಕೊಂಡ ಮೇರೆಗೆ ಸುಳ್ಯದಲ್ಲಿ ರೂಂ ವ್ಯವಸ್ಥೆ ಮಾಡಿ ಬಳಿಕ ವೈಯಕ್ತಿಕ ಕೆಲಸ ನಿಮಿತ್ತ ತೊಡಿಕಾನಕ್ಕೆ ತೆರಳಿದ್ದಾಗ 5 ಜನ ಆರೋಪಿಗಳು ಕಾರು ಮತ್ತು ಸ್ಕೂಟರ್ ಮೂಲಕ ಕಾರನ್ನು ತಡೆದು ಅವಾಚ್ಯವಾಗಿ ಬೈದು ಕೈಯಿಂದ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿ ತೆರಳಿರುತ್ತಾರೆ. ಆರೋಪಿಗಳ ಪೈಕಿ ಮೂವರ ಹೆಸರು ಲತೀಶ್ ಗುಂಡ್ಯ, ವರ್ಷಿತ್ ಹಾಗೂ ಪುನೀತ್ ಎಂಬುದಾಗಿ ಹಲ್ಲೆ ನಡೆಯುತ್ತಿದ್ದಾಗ ತಿಳಿದುಬಂದಿದೆ. ಇನ್ನುಳಿದ 02 ಜನ ಆರೋಪಿಗಳ ಪರಿಚಯ ಇರುವುದಿಲ್ಲ ” ಎಂದು‌ ದೂರು ನೀಡಿದ್ದಾನೆ.

ಈ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕಲಂ 143, 147, 341, 323, 504, 506, 153(A) ಜೊತೆಗೆ 149 ಐಪಿಸಿ ಯಂತೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಪೈಕಿ ಸುಳ್ಯ ಸೊಣಂಗೇರಿ ನಿವಾಸಿ ಪುನೀತ್ ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!