Thursday, May 2, 2024
spot_imgspot_img
spot_imgspot_img

ಉಡುಪಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ; ಆಡಳಿತ ಮಂಡಳಿ ಹಾಗೂ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲು

- Advertisement -G L Acharya panikkar
- Advertisement -
vtv vitla

ಉಡುಪಿ: ಉಡುಪಿ ಪ್ಯಾರಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೂರು ವಿದ್ಯಾರ್ಥಿನಿಯರು ವೀಡಿಯೋ ಚಿತ್ರೀಕರಣ ನಡೆಸಿದ ಘಟನೆಯ ಕುರಿತು ಕಾಲೇಜ್ ಮತ್ತು ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.

ಈ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡ ನಂತರ ಇದೀಗ ಪೊಲೀಸರು ಹೆಚ್ಚಿನ ತನಿಖೆಗಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ, ಅಲೀಮಾ ಈ ಮೂವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲಿಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಕೃತ್ಯ, ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸುವ ಕೃತ್ಯ, ಮಾಹಿತಿಯನ್ನು ಮತ್ತು ದಸ್ತಾವೇಜನ್ನು ಹಾಜರುಪಡಿಸಲು ತಪ್ಪುವ ಕೃತ್ಯದ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

- Advertisement -

Related news

error: Content is protected !!