Sunday, June 29, 2025
spot_imgspot_img
spot_imgspot_img

ನಶೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ; ಓರ್ವನ ಬಂಧನ..!

- Advertisement -
- Advertisement -

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ ಘಟನೆ ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಬಿಹಾರದ ಚಂಪರಣ್ ಮೂಲದ ಸೈಯದ್ ನಸ್ರು (30) ಎಂದು ಗುರುತಿಸಲಾಗಿದೆ.

ಆರೋಪಿ ಸೈಯದ್ ನಸ್ರು ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್​​​, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್​ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ​ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.

ಹಸುಗಳ ಮಾಲೀಕ ಕರ್ಣ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ​ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.

- Advertisement -

Related news

error: Content is protected !!