Friday, May 3, 2024
spot_imgspot_img
spot_imgspot_img

ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣ; ಇಬ್ಬರು ಅರೆಸ್ಟ್..!

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್‌ ನಲ್ಲಿ ಹೋಗುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡು ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಬಂಧಿತರು ಆರೋಪಿಗಳು. ಬಂಧಿತರನ್ನು ಪಾಂಡೇಶ್ವರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ನ. 27 ರಂದು ಸಂಜೆ 8 ಗಂಟೆ ವೇಳೆಯಲ್ಲಿ ಜತೆಯಾಗಿ ಬೈಕ್ ನಲ್ಲಿ ತೆರಳಿ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಗ್ರೆಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ಹೊರಟಿರುವಾಗ ಇದನ್ನು ನೋಡಿದ ಬಜರಂಗದಳ ಕಾರ್ಯಕರ್ತರು ಜೋಡಿಯನ್ನು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸ್ವಲ್ಪ ಹೊತ್ತಿನಲ್ಲಿ 2 ಕೋಮಿನ ಯುವಕರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದೆ. ಬಳಿಕ ಹೊಯ್ಸಳ ವಾಹನ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನು ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!