Saturday, May 4, 2024
spot_imgspot_img
spot_imgspot_img

ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ – ಒಬ್ಬಳ ಮೇಲಿನ ದ್ವೇಷಕ್ಕೆ ನಾಲ್ವರು ಬಲಿ!

- Advertisement -G L Acharya panikkar
- Advertisement -

ಉಡುಪಿ: ಭಾನುವಾರ ಬೆಳಗ್ಗೆ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ. ಒಬ್ಬಳ ಮೇಲಿನ ದ್ವೇಷಕ್ಕೆ ಇನ್ನೂ ಮೂವರು ಬಲಿಯಾಗಿರುವುದು ಇದೀಗ ತಿಳಿದುಬಂದಿದೆ.

ಸಂತೆಕಟ್ಟೆ ನೇಜಾರು ಸಮೀಪ ತಾಯಿ ಹಸೀನಾ (46), ಅಫ್ನಾನ್ (23), ಅಯ್ನಾಝ್ (21) ಹಾಗೂ ಆಸಿಂನನ್ನು (12) ದುಷ್ಕರ್ಮಿಯೊಬ್ಬ ಮಾರಕಾಸ್ತ್ರಗಳಿಂದ ಇರಿದು ಕೊಲೆ ) ಮಾಡಿದ್ದ. ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅಫ್ನಾನ್ ಮೇಲಿನ ದ್ವೇಷಕ್ಕೆ ದುಷ್ಕರ್ಮಿ ಇನ್ನೂ ಮೂವರನ್ನು ಕೊಲೆ ಮಾಡಿದ್ದಾನೆ.

ಅಫ್ನಾನ್ ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಅಯ್ನಾಝ್ ಲಾಜಿಸ್ಟಿಕ್ ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದರು. ಆಸಿಂ 8ನೇ ತರಗತಿಯಲ್ಲಿ ಓದುತ್ತಿದ್ದ. ತಾಯಿ ಹಸೀನಾ ಗೃಹಿಣಿಯಾಗಿದ್ದಳು. ಕಳೆದ ರಾತ್ರಿ ಅಫ್ನಾನ್ ರಜೆ ಹಿನ್ನೆಲೆ ಉಡುಪಿಗೆ ಬಂದಿದ್ದಳು. ಹಂತಕ ಬೆಂಗಳೂರಿನಿಂದ ಬಂದಿರುವ ಶಂಕೆ ಮೂಡಿದೆ. ಸಾಕ್ಷ್ಯ ನಾಶಮಾಡುವ ಸಲುವಾಗಿ ಉಳಿದ ಮೂವರನ್ನೂ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ರಿಕ್ಷಾದಲ್ಲಿ ಬಂದಿದ್ದ ಆರೋಪಿ
ಸಂತೆಕಟ್ಟೆಯಿಂದ ತೃಪ್ತಿ ನಗರಕ್ಕೆ ಆರೋಪಿ ರಿಕ್ಷಾದಲ್ಲಿ ಬಂದಿರುವುದು ಸ್ಪಷ್ಟವಾಗಿದೆ. ಸಂತೆಕಟ್ಟೆ ಸ್ಟಾಂಡ್ ನ ರಿಕ್ಷಾ ಚಾಲಕ ಶ್ಯಾಮ್ ಹೇಳಿಕೆ ನೀಡಿದ್ದು, ಆರೋಪಿ ಮನೆಯ ವಿಳಾಸವನ್ನು ಸರಿಯಾಗಿಯೇ ತಿಳಿಸಿದ್ದ. ದಾರಿ ತಪ್ಪಿದಾಗ ಆರೋಪಿಯೇ ಮನೆಯ ಗುರುತು ಹೇಳಿದ್ದ. ದೃಢಕಾಯದ ವ್ಯಕ್ತಿ, 45ರ ಆಸುಪಾಸಿನ ವಯಸ್ಸಿನವನಾಗಿದ್ದಾನೆ. ಬ್ರೌನ್ ಕಲರ್ ಅಂಗಿ ಧರಿಸಿದ್ದು, ಬಿಳಿ ಬಣ್ಣದ ಮಾಸ್ಕ್ ಹಾಕಿಕೊಂಡಿದ್ದ. ಮನೆಯಲ್ಲಿ ಬಿಟ್ಟು ಹೋಗಿ 15 ನಿಮಿಷಕ್ಕೆ ಮತ್ತೆ ಸಂತೆಕಟ್ಟೆ ಸ್ಟ್ಯಾಂಡ್ ಗೆ ಬಂದಿದ್ದ. ಗಡಿಬಿಡಿ ಅಲ್ಲಿ ತನ್ನನ್ನು ಕರೆದುಕೊಂಡು ಹೋಗುವಂತೆ ರಿಕ್ಷಾ ಚಾಲಕರಿಗೆ ಕೇಳಿಕೊಂಡಿದ್ದ. ಘಟನಾ ಸ್ಥಳದಿಂದ ದ್ವಿಚಕ್ರ ವಾಹನದಲ್ಲಿ ಆಟೋ ಸ್ಟಾಂಡ್ ತಲುಪಿದ್ದ ಎನ್ನುವುದು ಸ್ಪಷ್ಟವಾಗಿದೆ.
ಆರೋಪಿ ಬೆಂಗಳೂರು ಭಾಗದ ಶೈಲಿಯ ಕನ್ನಡ ಮಾತನಾಡುತ್ತಿದ್ದು ಮೇಲ್ನೋಟಕ್ಕೆ ಪರಿಚಯದವನೇ ಆಗಿದ್ದು ಆತನಿಂದಲೇ ಕೃತ್ಯ ನಡೆದಿರುವ ಸಾಧ್ಯತೆ ಇದೆ.

- Advertisement -

Related news

error: Content is protected !!