Monday, May 20, 2024
spot_imgspot_img
spot_imgspot_img

ಲೈಂಗಿಕ ದೌರ್ಜನ್ಯ ಪ್ರಕರಣ; ಮಾಜಿ ಸಚಿವ ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ..!

- Advertisement -G L Acharya panikkar
- Advertisement -

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮತ್ತೆ 7 ದಿನಗಳ ಕಾಲ ಜೈಲು ಪಾಲಾಗಿದ್ದಾರೆ.

ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನಲೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ರೇವಣ್ಣ ಅವರನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದೆ.

ಮಹಿಳೆ ಮೇಲೆ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ರೇವಣ್ಣ ಅವರು ಎ1 ಆರೋಪಿಯಾಗಿದ್ದಾರೆ. ಹೀಗಾಗಿ ರೇವಣ್ಣರ ಹೆಚ್ಚಿನ ವಿಚಾರಣೆ ಅವಶ್ಯಕತೆ ಇದೆ ಎಂದು ಎಸ್‌ಐಟಿ ಅಧಿಕಾರಿಗಳು ನಾಲ್ಕು ದಿನ ಕಸ್ಟಡಿಗೆ ಪಡೆದಿದ್ದರು. ಇದೀಗ ಮತ್ತೆ 7 ದಿನ ರೇವಣ್ಣ ಅವರು ಜೈಲುವಾಸ ಅನುಭವಿಸಲಿದ್ದಾರೆ.

- Advertisement -

Related news

error: Content is protected !!