Sunday, October 6, 2024
spot_imgspot_img
spot_imgspot_img

ಲೈಂಗಿಕ ದೌರ್ಜನ್ಯ ಪ್ರಕರಣ; ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್‌..!

- Advertisement -
- Advertisement -

ತೆಲುಗು, ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾಗಿರುವ ಜಾನಿ ಮಾಸ್ಟರ್‌ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸಹ ಕೊರಿಯೋಗ್ರಾಫರ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಜಾನಿ ಮಾಸ್ಟರ್‌ನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಜಾನಿ ಮಾಸ್ಟರ್ ವಿರುದ್ಧ ಹೈದರಾಬಾದ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್‌ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಈಗ ಜಾನಿ ಮಾಸ್ಟರ್‌ ಅರೆಸ್ಟ್‌ ಮಾಡಿದ್ದಾರೆ. ಈ ಪ್ರಕರಣವನ್ನು ನರಸಿಂಗಿ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ.

ಇತ್ತೀಚೆಗಷ್ಟೇ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು 21 ವರ್ಷದ ಯುವತಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಾನಿ ಮಾಸ್ಟರ್ ಕೆಲವು ದಿನಗಿಳಿಂದ ನನಗೆ ಕಿರುಕುಳ ನೀಡುತ್ತಿದ್ದರು. ಹೊರಾಂಗಣ ಚಿತ್ರೀಕರಣ ವೇಳೆ, ದೈಹಿಕ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು.

- Advertisement -

Related news

error: Content is protected !!