Sunday, June 29, 2025
spot_imgspot_img
spot_imgspot_img

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಮುರುಘಾಶ್ರೀ ಗೆ ಜಾಮೀನು, ಆದ್ರೆ ಸದ್ಯಕಿಲ್ಲ ಬಿಡುಗಡೆ ಭಾಗ್ಯ

- Advertisement -
- Advertisement -

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗೆ ಜಾಮೀನು ಸಿಕ್ಕಿದೆ. ಒಂದು ಪ್ರಕರಣದಲ್ಲಿ ಮಾತ್ರ ಮುರುಘಾ ಶ್ರೀಗೆ ಜಾಮೀನು ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಬಿಡುಗಡೆ ಭಾಗ್ಯ ಇಲ್ಲ. ಜಾಮೀನ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್​ ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂದು ಹೇಳುವ ಮೂಲಕ ಚಿತ್ರದುರ್ಗಕ್ಕೆ ಹೋಗದಂತೆ ಷರತ್ತು ವಿಧಿಸಿದೆ. ಮೊದಲು ದಾಖಲಾಗಿದ್ದ ಒಂದು ಪ್ರಕರಣದಲ್ಲಿ ಜಾಮೀನು ಲಭ್ಯವಾಗಿದ್ದು, ಪೋಕ್ಸೋ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣದಲ್ಲಿ ಅವರು ಜೈಲಿನಲ್ಲಿ ಉಳಿದುಕೊಳ್ಳಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಮುರುಘಾಶ್ರೀ ಪರ ವಕೀಲ ಏಳು ಷರತ್ತುಗಳ ಮೇಲೆ ಮುರುಘಾಶ್ರೀ ಜಾಮೀನು ಲಭ್ಯವಾಗಿದೆ. ಪಾಸ್‌ಪೋರ್ಟ್ ಸರೆಂಡರ್‌ ಮಾಡಬೇಕು,ವಿಟ್ನೆಸ್ ಗಳ ಮೇಲೆ ಪ್ರಭಾವ ಬೀರಬಾರದು. ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ. ಎರಡು ಲಕ್ಷ ಬಾಂಡ್ ಹಾಗೂ ಇಬ್ಬರು ವ್ಯಕ್ತಿಗಳ ಶ್ಯೂರಿಟಿ ಮೇರೆಗೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಮುರುಘಾ ಶ್ರೀ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿದ್ದು, ಇದೀಗ ನ್ಯಾಯಾಲಯ ಮುರುಘಾ ಶ್ರೀಗೆ ಜಾಮೀನು ಮಾಡಿದೆ.

- Advertisement -

Related news

error: Content is protected !!