Saturday, June 28, 2025
spot_imgspot_img
spot_imgspot_img

ಮಂಗಳೂರು: ಮದುವೆಯಾಗುತ್ತೇನೆ ಎಂದು ಹೇಳಿ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಓರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಅನಜೂರು ಗ್ರಾಮದ ಮೊಹಮ್ಮದ್‌ ರಝೀನ್‌(25) ಎಂದು ಗುರುತಿಸಲಾಗಿದೆ.

ಆರೋಪಿ ಅಪ್ರಾಪ್ತೆ ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ಮಂಗಳೂರಿನ, ಕುಂಪಲದ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ ಮದುವೆಯಾಗುತ್ತೇನೆ ಎಂದು ಹೇಳಿ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ಪೊಲೀಸ್‌ ರಾಣೆಯಲ್ಲಿ ದೂರು ದಾಖಲಾಗಿತ್ತು. ಡಿ. 31, 2023ರಂದು ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆರೋಪಿಯ ಪತ್ತೆಕಾರ್ಯದಲ್ಲಿ ಮಂಗಳೂರು ದಕ್ಷಿಣ ಉಪ-ವಿಭಾಗದ ಪೊಲೀಸ್‌ ಆಯುಕ್ತರಾದ ಧನ್ಯ ಎನ್‌ ನಾಯಕ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ತನಿಖೆ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!