Sunday, June 15, 2025
spot_imgspot_img
spot_imgspot_img

ಲೈಂಗಿಕ ಕಿರುಕುಳ ಪ್ರಕರಣ; ನಟ, ರಾಜಕಾರಣಿ ಮುಕೇಶ್ ಬಂಧನ..!

- Advertisement -
- Advertisement -

ಕೇರಳ: ಮಲಯಾಳಂ ಸಿನಿಮಾರಂಗದಲ್ಲಿ MeToo ಆಂದೋಲನದ ಹಿನ್ನೆಲೆಯಲ್ಲಿ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ ಜನಪ್ರಿಯ ಮಲಯಾಳಂ ನಟ ಮತ್ತು ಸಿಪಿಐ(ಎಂ) ಶಾಸಕ ಮುಖೇಶ್ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಇಂದು ಬಂಧಿಸಿದೆ.

ಕೊಚ್ಚಿಯ ಕೋಸ್ಟಲ್ ಪೊಲೀಸ್ ಆಫೀಸಿನಲ್ಲಿ ಮುಖೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಎಐಜಿ ಪೂಂಗಾಝಾಲಿ ನೇತೃತ್ವದಲ್ಲಿ ನಡೆದ ವಿಚಾರಣೆಯ ನಂತರ ಮುಖೇಶ್ ಬಂಧನವಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಖೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ. ಬಂಧಿಸಿ ನಂತರ ಬಿಡುಗಡೆ ಮಾಡುವ ಮಾಹಿತಿಯೂ ಇದೆ. ಒಟ್ಟಿನಲ್ಲಿ ಮುಖೇಶ್ ಬಂಧನ ಇತರರಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

- Advertisement -

Related news

error: Content is protected !!