Monday, May 6, 2024
spot_imgspot_img
spot_imgspot_img

ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿದ ಪ್ರಕರಣ; ಕಿಂಗ್ ಪಿನ್ ಆರ್​​​​​​​​ಡಿ ಪಾಟೀಲ್ ಪರಾರಿ

- Advertisement -G L Acharya panikkar
- Advertisement -
vtv vitla

ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯ ಆರೋಪಿ ಅಡಗಿ ಕುಳಿತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಆರೋಪಿ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲೆತ್ನಿಸಿದ ಪ್ರಕರಣದ ಮುಖ್ಯ ಆರೋಪಿ ಆರ್.ಡಿ. ಪಾಟೀಲ ಕಲ್ಬುರ್ಗಿ ನಗರದ ಜೇವರ್ಗಿಯ ರಸ್ತೆಯಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಅಡಗಿ ಕುಳಿತಿದ್ದ. ಈ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದು, ಆದರೆ ಆತ ತಪ್ಪಿಸಿಕೊಂಡಿದ್ದಾನೆ.

ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿರುವುದನ್ನು ಗಮನಿಸಿದ ಆರ್.ಡಿ. ಪಾಟೀಲ, ವಸತಿ ಸಮುಚ್ಚಯದ ಕಾಂಪೌಂಡ್ ಮೇಲಿಂದ ಹಾರಿ ತಪ್ಪಿಸಿಕೊಂಡು ಓಡಿ ಹೋಗಿರುವ ದೃಶ್ಯಗಳು ವಸತಿ ಸಮುಚ್ಛಯದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

- Advertisement -

Related news

error: Content is protected !!