Sunday, May 5, 2024
spot_imgspot_img
spot_imgspot_img

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಮಗು ಮೃತ್ಯು..!

- Advertisement -G L Acharya panikkar
- Advertisement -

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ವೈಟ್ ಫೀಲ್ಡ್ ಬಳಿಯ ಕಾಡುಗೊಡಿಯಲ್ಲಿ ನಡೆದಿದೆ.

ಮೃತಪಟ್ಟವರು ತಾಯಿ ಸೌಂದರ್ಯ(23) ಹಾಗೂ 9 ತಿಂಗಳ ಮಗು ಲೀಲಾ ಎಂದು ಗುರುತಿಸಲಾಗಿದೆ.

ತಮಿಳುನಾಡು ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದು, ದೀಪಾವಳಿ ಹಬ್ಬಕ್ಕೆ ಚೆನ್ನೈಗೆ ಹೋಗಿದ್ದ ಸೌಂದರ್ಯ, ಪತಿ ಸಂತೋಷ್ ಹಾಗೂ 9 ತಿಂಗಳ ಕಂದಮ್ಮ ಲಿಯಾ ಇಂದು ಮುಂಜಾನೆ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ದಾರಿಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ಅದನ್ನು ಸೌಂದರ್ಯ ತುಳಿದ ಪರಿಣಾಮ ಪತ್ನಿ ಹಾಗೂ ಕಂದಮ್ಮ ವಿದ್ಯುತ್ ಶಾಕ್‌ಗೆ ಸುಟ್ಟು ಕರಕಲಾಗಿದ್ದಾರೆ. ಪತಿ ಸಂತೋಷ್ ಕೈಗೆ ವಿದ್ಯುತ್ ಶಾಕ್ ಹೊಡೆದು ಅದೃಷ್ಟವಶಾತ್ ಅವರು ಪಕ್ಕಕ್ಕೆ ಬಿದ್ದಿದ್ದರು. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಸ್ಕಾಂ ಎಇ ಚೇತನ್, ಎಇಇ ಸುಬ್ರಮಣಿ ಹಾಗೂ ಇಇ ಶ್ರೀ ರಾಮನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!