Sunday, June 14, 2026
spot_imgspot_img
spot_imgspot_img

ಡೇ ಕೇರ್ ಸೆಂಟರ್​ನ 3ನೇ ಮಹಡಿಯಿಂದ ಬಿದ್ದಿದ್ದ ಮಗು ಚಿಕಿತ್ಸೆ ಫಲಿಸದೆ ಸಾವು

- Advertisement -
- Advertisement -

ಬೆಂಗಳೂರು: ಡೇ ಕೇರ್ ಸೆಂಟರ್ (day care center) ​ನ 3ನೇ ಮಹಡಿಯಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದೆ. ಕೇರಳ ಮೂಲದ ಟೆಕ್ಕಿ ದಂಪತಿ ಜಿಟೋ ಟಾಮಿ ಜೋಸೆಫ್, ಬಿನಿಟೋ ಥಾಮಸ್ ಪುತ್ರಿ ಜಿನಾ ಮೃತ ಮಗು. ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಜನವರಿ 22 ರ ಮಧ್ಯಾಹ್ನ ಖಾಸಗಿ ಫ್ರೀ ಸ್ಕೂಲ್ (ನರ್ಸರಿ) ಮೂರನೇ ಮಹಡಿಯಿಂದ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ಹಾಗಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಬ್ಬಾಳ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಡೆಲ್ಲಿ ಫ್ರಿ ಸ್ಕೂಲ್(ನರ್ಸರಿ) ವಿರುದ್ದ ಎಫ್​ಐಆರ್ ದಾಖಲು ಮಾಡಲು ಮುಂದಾಗಿದ್ದರು. ಮಗುವಿನ ತಂದೆ ಜಿಯೋ ಟಾಮಿ ಜೋಸೆಫ್​ ಅವರು ‘ವಾಸ್ತವಾಂಶ ಮರೆಮಾಡಿ, ಸರಿಯಾದ ಮಾಹಿತಿ ನೀಡದೆ, ನಿರ್ಲಕ್ಷ್ಯ ವಹಿಸಿರುವ ಫ್ರೀ ಸ್ಕೂಲ್ ವಿರುದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

- Advertisement -

Related news

error: Content is protected !!