- Advertisement -
- Advertisement -



ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ–ಪಾಲಿಬೆಟ್ಟ ರಸ್ತೆ ಬದಿಯಲ್ಲಿ ನಡೆದಿದೆ.
ಸಿದ್ದಾಪುರದ ಅಂಬೇಡ್ಕರ್ ನಗರ ಬಡಾವಣೆ ನಿವಾಸಿ ಕ್ರಿಸ್ಟಲ್(28) ಮೃತ ಯುವಕ ಎಂದು ತಿಳಿದು ಬಂದಿದೆ. ಯುವಕನ ಮೃತದೇಹ ಪತ್ತೆಯಾಗಿದ್ದು, ಹಲ್ಲೆಯಿಂದ ಮೃತಪಟ್ಟಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ. ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -