Sunday, June 7, 2026
spot_imgspot_img
spot_imgspot_img

ಪಾಳುಬಿದ್ದ ಜಮೀನಲ್ಲಿ ಬುದ್ಧಿಮಾಂದ್ಯ ಮಹಿಳೆ ಶವವಾಗಿ ಪತ್ತೆ..!

- Advertisement -
- Advertisement -

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಪಾಳುಬಿದ್ದ ಜಮೀನಲ್ಲಿ ಮಹಿಳೆಯ ಬೆತ್ತಲೆ ಮೃತ ದೇಹ ಪತ್ತೆಯಾಗಿದ್ದು ಬುದ್ಧಿಮಾಂದ್ಯ ಮಹಿಳೆ ರೇಪ್​ ಮಾಡಿ ಹತ್ಯೆಗೈದ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ತಿರುಮಲಪುರ ಗ್ರಾಮದ 29 ವರ್ಷದ ಮಹಿಳೆಯ ಮೃತ ದೇಹ ಎಂದು ಗುರುತಿಸಲಾಗಿದೆ. ಬೆಳ್ಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಪಕ್ಕದ ಹರ್ಷ ಹೋಟೆಲ್ ಸಮೀಪದ ಪಾಳು ಜಮೀನಿನಲ್ಲಿ ಮೃತದೇಹ ಪತ್ತೆಯಾಗಿದೆ. ನಾಲ್ಕು ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದ ಬುದ್ಧಿಮಾಂದ್ಯ ಮಹಿಳೆ ಇಂದು ಬೆತ್ತಲೆ ಶವವಾಗಿ ಪತ್ತೆಯಾಗಿದ್ದಾರೆ. ಪಾಳು ಜಮೀನಿನಲ್ಲಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!