Thursday, June 18, 2026
spot_imgspot_img
spot_imgspot_img

ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!

- Advertisement -
- Advertisement -

ಬೈಂದೂರು: ಅನಾರೋಗ್ಯದ ಕಾರಣ ಮನನೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರಿನ ಬಾಡ ಬಟಾವಡಿ ಮನೆ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಭವಾನಿ (59) ಎಂದು ಗುರುತಿಸಲಾಗಿದೆ.

ಕಳೆದ ಮೂರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭವಾನಿ ಅವರು, ಕುಂದಾಪುರದ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕವೂ ಗುಣಮುಖವಾಗದ ಕಾರಣ ತಮ್ಮ ಅನಾರೋಗ್ಯದಿಂದ ಮನನೊಂದು ತಾವು ವಾಸವಿದ್ದ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಪತಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!