Sunday, June 14, 2026
spot_imgspot_img
spot_imgspot_img

ನಟ ಯಶ್ ನೋಡಲು ಬರುತ್ತಿದ್ದ ಅಭಿಮಾನಿಯ ಸ್ಕೂಟಿ ಯಶ್ ಬೆಂಗಾವಲು ವಾಹನಕ್ಕೆ ಡಿಕ್ಕಿ- ಯುವಕನ ಸ್ಥಿತಿ ಗಂಭೀರ

- Advertisement -
- Advertisement -

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಗಾಯಾಳುಗಳ ಆರೋಗ್ಯ ವಿಚಾರಿಸಿ ವಾಪಸ್ ಆಗುತ್ತಿದ್ದಾಗ ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.

ಅಪಘಾತಕ್ಕೊಳಗಾಗಿರುವ ಯುವಕ ಯಶ್ ನೋಡಲು ಬರುತ್ತಿದ್ದ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಸವಾರನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಗಾಯಾಳು ಯುವಕನ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಗಾಯಾಳುವನ್ನು ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿಖಿಲ್ (32) ಎಂದು ಗುರುತಿಸಲಾಗಿದೆ.

- Advertisement -

Related news

error: Content is protected !!