Saturday, May 18, 2024
spot_imgspot_img
spot_imgspot_img

ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನೇ ಕತ್ತು ಹಿಸುಕಿ ಕೊಂದ ತಂದೆ; ಮನನೊಂದು ರೈಲಿನಡಿಗೆ ತಲೆ ಕೊಟ್ಟ ಪ್ರಿಯಕರ

- Advertisement -G L Acharya panikkar
- Advertisement -

ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದು ಈ ಘಟನೆಯಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ.

ಮೃತರು ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದವರು. ಗೊಲ್ಲ ಸಮುದಾಯಕ್ಕೆ ಸೇರಿದ ಕೀರ್ತಿ (20) ಮತ್ತು ಪರಿಶಿಷ್ಟ ಜಾತಿ ಸಮುದಾಯದ ಗಂಗಾಧರ್ (24) ಮೃತರಾಗಿದ್ದಾರೆ. ಇವರಿಬ್ಬರೂ ಸಹ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯ ವಿಚಾರವನ್ನು ಗಂಗಾಧರ್ ಕೀರ್ತಿಯ ತಂದೆ ಕೃಷ್ಣಮೂರ್ತಿಗೆ ತಿಳಿಸಿ, ಮದುವೆ ಮಾಡಿಕೊಡಲು ಕೇಳಿದ್ದಾರೆ. ಆದರೆ ಜಾತಿಯ ಕಾರಣದಿಂದ ಕೀರ್ತಿಯ ಮನೆಯವರು ಮದುವೆಗೆ ಒಪ್ಪಿರಲಿಲ್ಲ. ಗಂಗಾಧರ್‌ನನ್ನು ಮರೆತುಬಿಡು ಎಂದು ಕೀರ್ತಿಯ ಪೋಷಕರು ಆಕೆಗೆ ಹಲವು ಬಾರಿ ಬುದ್ಧಿವಾದ ಹೇಳಿದ್ದಾರೆ.

ಇದ್ಯಾವುದನ್ನು ಲೆಕ್ಕಿಸದೇ ಪ್ರೇಮಿಗಳಿಬ್ಬರು ತಮ್ಮ ಪ್ರೀತಿಯನ್ನು ಮುಂದುವರೆಸಿದ್ದಾರೆ. ಈ ವಿಚಾರವಾಗಿ ಮಂಗಳವಾರ ಬೆಳಿಗ್ಗೆ ಕೀರ್ತಿ ಹಾಗೂ ಆಕೆಯ ತಂದೆ ಕೃಷ್ಣಮೂರ್ತಿ ನಡುವೆ ವಾಗ್ವಾದ ಬೆಳೆದು, ಕೋಪಗೊಂಡ ಕೃಷ್ಣಮೂರ್ತಿ (42) ಮಗಳನ್ನು ಕತ್ತು ಹಿಸುಕಿ ಸಾಯಿಸಿದ್ದಾನೆ. ಗಾಢವಾಗಿ ಪ್ರೀತಿಸುತ್ತಿದ್ದ ಕೀರ್ತಿ ಸತ್ತಿರುವುದನ್ನು ನೋಡಿದ ಗಂಗಾಧರ್ ಅದೇ ಗ್ರಾಮದ ಬಳಿ ಚಲಿಸುತ್ತಿದ್ದ ಲಾಲ್‌ಬಾಗ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಕೃಷ್ಣಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!