Wednesday, August 19, 2026
spot_imgspot_img
spot_imgspot_img

ಬೆಳ್ತಂಗಡಿ: ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಇನ್ನೋವಾ ಕಾರು ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಮೇ.24ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತೋಟತ್ತಾಡಿ ಗ್ರಾಮದ ಅಗರಿ ಕೃಷ್ಣಪ್ಪ ಗೌಡರ ಪುತ್ರ ಕುಶಾಲಪ್ಪ ಗೌಡ ಯಾನೆ ಪ್ರಶಾಂತ(35) ಎಂಬವರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಮೇ.21ರಂದು ಇನ್ನೋವಾ ಕಾರು ಡಿಕ್ಕಿಯಾಗಿದ್ದು, ಈ ವೇಳೆ ಪ್ರಶಾಂತ್ ಅವರ ತಲೆ ಹಾಗೂ ಹೊಟ್ಟೆ ಭಾಗಕ್ಕೆ ತೀವ್ರ ಗಾಯವಾಗಿತ್ತು.

ತಕ್ಷಣ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ಅವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರು ತಂದೆ,ತಾಯಿ, ಸಹೋದರ,ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!