Sunday, May 5, 2024
spot_imgspot_img
spot_imgspot_img

4 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; ಜೀವ ಉಳಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಜಿಗಿದ ವ್ಯಕ್ತಿ

- Advertisement -G L Acharya panikkar
- Advertisement -

ಕೋರಮಂಗಲದ 4 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಕಟ್ಟಡದ ಟೆರಿಸ್‌ನಿಂದ ಜಿಗಿದಿರುವ ಆಘಾತಕಾರಿ ಘಟನೆ ನಡೆದಿದೆ.

ಕೋರಮಂಗಲದ ಮಡ್ ಪೈಪ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ. ಈ ವೇಳೆ ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ಕೊನೆಯ ಮಹಡಿಯಿಂದ ಕೆಳಗೆ ಜಿಗಿದಿದ್ದಾನೆ. ಸ್ಥಳೀಯರು ಇದರ ವೀಡಿಯೋ ಚಿತ್ರೀಕರಿಸಿದ್ದಾರೆ. ಇದೀಗ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ.

ಸಿಲಿಂಡರ್ ಬ್ಲಾಸ್ಟ್‌ನಿಂದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬಿಲ್ಡಿಂಗ್‌ನ ಮೇಲೆ ಇರುವ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿ ಅವಘಡವಾದ ಬಳಿಕ 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಬೆಂಕಿ ನಿಯಂತ್ರಿಸಲು ಅಗ್ನಿಶಾಮಕ ದಳದವರು ಹರಸಾಹಸಪಡುತ್ತಿದ್ದಾರೆ.

ಕಟ್ಟಡದ ಮೇಲ್ಬಾಗದಲ್ಲಿ 5-6 ಸಿಲಿಂಡರ್‌ಗಳನ್ನು ಇಡಲಾಗಿತ್ತು ಎನ್ನಲಾಗಿದೆ. ಬಿಲ್ಡಿಂಗ್ ಹತ್ತಿರವೂ ಸುಳಿಯಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಅಕ್ಕ-ಪಕ್ಕದ ಬಿಲ್ಡಿಂಗ್‌ಗೆ ಬೆಂಕಿ ಆವರಿಸುವ ಆತಂಕದಲ್ಲಿದ್ದಾರೆ.

- Advertisement -

Related news

error: Content is protected !!