Saturday, May 4, 2024
spot_imgspot_img
spot_imgspot_img

ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಬೆಂಕಿ; ಇಬ್ಬರು ಪ್ರಯಾಣಿಕರು ಸಜೀವ ದಹನ

- Advertisement -G L Acharya panikkar
- Advertisement -

ಸಂಚರಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಇಬ್ಬರು ಸಾವನ್ನಪ್ಪಿರೋ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುರುಗ್ರಾಮದ ಸಿಗ್ನೇಚರ್ ಟವರ್ ಮೇಲ್ಸೇತುವೆ ಬಳಿ ನಡೆದಿದೆ.

ಸ್ಲೀಪರ್‌ ಬಸ್‌ನಲ್ಲಿ ಸಾಕಷ್ಟು ಪ್ರಯಾಣಿಕರು ನಿದ್ರೆಗೆ ಜಾರಿದ್ದರು. ಇದೇ ವೇಳೆ ಬಸ್​​ನಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್​​ನಲ್ಲಿದ್ದ ಕೆಲ ಪ್ರಯಾಣಿಕರು ಬಸ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆದ್ರೆ ಇಬ್ಬರು ಬೆಂಕಿ ಕೆನ್ನಾಲಿಗೆಗೆ ಮೃತಪಟ್ಟಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೋಲಿಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!