Thursday, June 4, 2026
spot_imgspot_img
spot_imgspot_img

ಬಟ್ಟೆ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; 8ಕ್ಕೂ ಅಧಿಕ ಅಂಗಡಿಗಳಿಗೆ ಹಾನಿ..!

- Advertisement -
- Advertisement -

ಶಿವಮೊಗ್ಗ: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 8ಕ್ಕೂ ಅಧಿಕ ಅಂಗಡಿಗಳ ಒಳಗಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗದ ಘಟನೆ ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿ ನಡೆದಿದೆ.

ಗಾಂಧಿ ಬಜಾರ್ ನಲ್ಲಿರುವ ಬಸವೇಶ್ವರ ದೇವಸ್ಥಾನದ ಹಿಂಭಾಗದ ಬಟ್ಟೆ ಮಾರುಕಟ್ಟೆಯ ಸುಮಾರು ಏಳೆಂಟು ಅಂಗಡಿಗಳಿಗೆ ಬೆಂಕಿ ಆವರಿಸಿದ್ದು, ಒಳಗಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆಯ ಹಿನ್ನೆಲೆಯಲ್ಲಿ ಬಟ್ಟೆ ಮಾರುಕಟ್ಟೆ ಭಾಗದಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಲಾಗಿತ್ತು.

ಘಟನಾ ಸ್ಥಳಕ್ಕೆ ಪಾಲಿಕೆ ಆಯುಕ್ತ ಕವಿತಾ ಯೋಗಪ್ಪನವ‌ರ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!