Friday, May 3, 2024
spot_imgspot_img
spot_imgspot_img

ಮತದಾನ ನಡೆಯುವ 2 ದಿನವೂ ಕರ್ನಾಟಕದಲ್ಲಿ ಸಾರ್ವತ್ರಿಕ ರಜೆ ಘೋಷಣೆ

- Advertisement -G L Acharya panikkar
- Advertisement -

ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಉಭಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅವರವರ ಕ್ಷೇತ್ರಗಳಲ್ಲಿ ಮತಯಾಚನೆ ಶುರು ಮಾಡಿದ್ದಾರೆ. ಇನ್ನು ದೇಶದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಮತದಾನ ನಡೆಯುವ ಈ ಎರಡೂ ದಿನಗಳಂದು ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡಲು ಪ್ರಕಟಣೆ ಮೂಲಕ ಆದೇಶಿಸಿದ್ದಾರೆ.

ಇನ್ನು ಈ ಎರಡು ದಿನಗಳಂದು ಪ್ರತಿಯೊಬ್ಬರು ಮತದಾನ ಮಾಡಲಿ ಎಂಬ ಉದ್ದೇಶದಿಂದ ಸಾರ್ವತ್ರಿಕ ರಜೆ ಘೋಷಿಸಲಾಗಿದೆ

- Advertisement -

Related news

error: Content is protected !!