Saturday, June 13, 2026
spot_imgspot_img
spot_imgspot_img

ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿ ನಾಪತ್ತೆ

- Advertisement -
- Advertisement -

ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿಯೋರ್ವ ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ, ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಮ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿರುವ, ಕೊಲ್ಪೆದಬೈಲು ನಿವಾಸಿ ಲಕ್ಷ್ಮೀನಾರಾಯಣ ಅವರು ಕಾಣೆಯಾದ ಅಧಿಕಾರಿ.

ಮಾ.27 ರಂದು ಬುಧವಾರ ಕಚೇರಿಯಿಂದ ಮಧ್ಯಾಹ್ನದ ನಂತರ ತೆರಳಿದವರು ಫೋನ್ ಸ್ವಿಚ್ ಆಪ್ ಆಗಿದ್ದು,ಮನೆಗೂ ಹೋಗದೆ ಮನೆಯವರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದಾರೆ ಎಂದು ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಎಸ್.ಎಸ್.ಟಿ.ತಂಡದಲ್ಲಿ ಲಕ್ಷ್ಮೀನಾರಾಯಣ ಕರ್ತವ್ಯ ನಿರ್ವಹಿಸಿತ್ತಿದ್ದು, ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ತಂಡದವರು ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಇದೀಗ ಲಕ್ಷ್ಮೀನಾರಾಯಣ ಅವರ ಬೈಕ್ ಮತ್ತು ಮೊಬೈಲ್ ಪೋನ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ದು, ಲಕ್ಷ್ಮೀನಾರಾಯಣ ಅವರಿಗಾಗಿ ಪೋಲೀಸರು ಹುಡುಕಾಟ ನಡೆಸುತ್ತಿದ್ದಾರೆ.

- Advertisement -

Related news

error: Content is protected !!