Sunday, June 14, 2026
spot_imgspot_img
spot_imgspot_img

ಕುಂದಾಪುರ: ಉದ್ಯಮಿ ಮನೆಗೆ ಅಧಿಕಾರಿಗಳ ಸೋಗಿನಲ್ಲಿ ಬಂದ ಅಪರಿಚಿತರ ತಂಡ

- Advertisement -
- Advertisement -

ಕುಂದಾಪುರ: ಬೆಳ್ಳಂಬೆಳಗ್ಗೆ ಎರಡು ಕಾರುಗಳಲ್ಲಿ ಪೊಲೀಸ್‌ ಹಾಗೂ ಅಧಿಕಾರಿಗಳ ಸೋಗಿನಲ್ಲಿ ಕುಂದಾಪುರ ಸಮೀಪದ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬಂದ ಅಪರಿಚಿತರ ತಂಡವೊಂದು ಸುತ್ತ ಮುತ್ತಲಿನ ಪರಿಸರದಲ್ಲಿ ಆತಂಕ ಸೃಷ್ಟಿಸಿದೆ.

ಈ ಬಗ್ಗೆ ಮನೆ ಮಾಲಕಿ ಮಣೂರು ಗ್ರಾಮದ ಕವಿತಾ (34) ಅವರು ಕೋಟ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ದೂರಿನಲ್ಲಿ ಜು.25ರಂದು ಬೆಳಗ್ಗೆ 8.30 ಗಂಟೆಗೆ ಮನೆಯ ಹೊರಗಿನಿಂದ ಯಾರೋ ಬಾಗಿಲು ಬಡಿದ ಶಬ್ದವಾಗಿತ್ತು. ಆಗ ನಿರ್ಲಕ್ಷಿಸಿದ್ದು, 9 ಗಂಟೆಗೆ ಹೊರಗೆ ಬಂದು ನೋಡಿದಾಗ ಯಾರೂ ಇರಲಿಲ್ಲ.
ಈ ನಡುವೆ ಮನೆಯ ಸಿಸಿಟಿವಿ ಮೇಲೆ ನಿಗಾ ಇಡುತ್ತಿರುವ ಕುಂದಾಪುರದ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯ ಕೃಷ್ಣ ಕರೆ ಮಾಡಿ, ನಿಮ್ಮ ಮನೆಗೆ ಸ್ವಿಫ್ಟ್ ಮತ್ತು ಇನೋವಾ ಕಾರಿನಲ್ಲಿ 6-8 ಜನ ಮಂದಿ ಆಗಮಿಸಿ ಗೇಟು ತೆರೆಯಲು ಯತ್ನಿಸಿದ್ದರು. ಸಾಧ್ಯವಾಗದಿದ್ದಾಗ ಕಾಂಪೌಂಡ್ ಹಾರಿ ಮನೆಗೆ ಬಂದು ಬಾಗಿಲು ಹಾಗೂ ಕಿಟಕಿಯನ್ನು ಬಲಾತ್ಕಾರವಾಗಿ ತೆಗೆಯಲು ಪ್ರಯತ್ನಿಸಿರುವುದಾಗಿ ತಿಳಿಸಿದ್ದಾರೆ. ಅಪರಿಚಿತರು ಮನೆಗೆ ಅಕ್ರಮ ಪ್ರವೇಶ ಮಾಡಿ, ಮನೆಯ ಬಾಗಿಲು ತೆರೆಯಲು ಯತ್ನಿಸಿ, ಗೇಟಿಗೆ ಹಾನಿ ಮಾಡಿ ವಾಪಸ್ ಹೋಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

- Advertisement -

Related news

error: Content is protected !!