Saturday, June 28, 2025
spot_imgspot_img
spot_imgspot_img

ಬಂಟ್ವಾಳ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ; ಚಿಕಿತ್ಸೆ ಫಲಿಸದೆ ಬೈಕ್ ಸವಾರ ಮೃತ್ಯು

- Advertisement -
- Advertisement -

ಬಂಟ್ವಾಳ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಮಂಗಳೂರಿನಲ್ಲಿ ಮೆಕಾನಿಕ್ ಕೆಲಸ ಮಾಡುತ್ತಿದ್ದು, ಭಾನುವಾರ ರಜಾದಿನವಾದ್ದರಿಂದ ಬೆಳಿಗ್ಗೆ ಪಣೋಲಿಬೈಲು ದೈವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕದಲ್ಲಿ ಅಪಘಾತ ನಡೆದಿದೆ.

ಕಲ್ಲಡ್ಕದಿಂದ ವಿಟ್ಲ ರಸ್ತೆಯಲ್ಲಿ ಹೋಗುವ ವೇಳೆ ವಿಟ್ಲದಿಂದ ಅತೀ ವೇಗದಿಂದ ಬರುತ್ತಿದ್ದ ಬೈಕ್ ಗೆ ಸೆಲಿನಾ  ಖಾಸಗಿ ಬಸ್  ಡಿಕ್ಕಿಯಾಗಿದೆ.

ಡಿಕ್ಕಿಯಾದ ರಭಸಕ್ಕೆ ಲತೀಶ್ ಗೆ ಗಂಭೀರವಾಗಿ ಗಾಯವಾಗಿತ್ತು ಹಾಗಾಗಿ ಈತನನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಲತೀಶ್ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಆದರೆ  ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ

ಟ್ರಾಫಿಕ್ ಎಸ್. ಐ.ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!