Friday, June 27, 2025
spot_imgspot_img
spot_imgspot_img

ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ; 8 ಜನ ಮೃತ್ಯು

- Advertisement -
- Advertisement -

ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ. ತಿರುವಣ್ಣಾಮಲೈ-ಬೆಂಗಳೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದವರು ತಮಿಳುನಾಡಿನ ದೇವಸ್ಥಾನವೊಂದಕ್ಕೆ ಭೇಟಿ ನೀಡಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಆರು ಜನ ಮೃತಪಟ್ಟಿದ್ದಾರೆ. ಇನ್ನಿಬ್ಬರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ತೀವ್ರ ಹಾನಿಗೊಳಗಾಗಿವೆ. ಇದರಿಂದಾಗಿ ವಾಹನಗಳು ಮಿತಿಮೀರಿದ ವೇಗದಲ್ಲಿ ಅಪಘಾತಕ್ಕೊಳಗಾಗಿವೆ ಎನ್ನಲಾಗಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!