Monday, July 7, 2025
spot_imgspot_img
spot_imgspot_img

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸಾವು, ಇಬ್ಬರು ಗಂಭೀರ..!

- Advertisement -
- Advertisement -

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮುಂಡಗೋಡ ಪಟ್ಟಣದ ಹೊರವಲಯದ ಕಲಘಟಗಿ ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವಕ ಪಟ್ಟಣದ ಹಳೂರಿನ ನಿವಾಸಿ ಅರವಿಂದ ಬೆಲ್ದಾರ (24) ಎಂದು ಗುರುತಿಸಲಾಗಿದೆ.

ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅರವಿಂದ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು‌ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಗಾಯಗೊಂಡವರನ್ನು ತಾಲೂಕಿನ ಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ. ತಕ್ಷಣವೇ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಂಡಗೋಡ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮುಂಡಗೋಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!