Tuesday, May 14, 2024
spot_imgspot_img
spot_imgspot_img

ಕೊಪ್ಪದ ಕಾಡಿನಲ್ಲಿ ಮೂವರು ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿ ಪತ್ತೆ; ಫೋಟೋ ವೈರಲ್‌ ಬೆನ್ನಲ್ಲೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

- Advertisement -G L Acharya panikkar
- Advertisement -

ಚಿಕ್ಕಮಗಳೂರು ಕೊಪ್ಪ ಹಾಸ್ಟೆಲ್ ನಲ್ಲಿ ಇದ್ದು ಕಾಲೇಜು ಓದುತ್ತಿದ್ದ ಹಿಂದೂ ಹುಡುಗಿಯೊಬ್ಬಳು ಮೂವರು ಮುಸ್ಲಿಂ ಹುಡುಗರೊಂದಿಗೆ ಕೊಪ್ಪದ ಕಾಡಿನಲ್ಲಿ ಪತ್ತೆಯಾದ ವಿಚಾರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಚಿಕ್ಕಮಗಳೂರು SP ಯಾವುದೇ ಅಹಿತಕರ ಘಟನೆ ನಡೆದಿಲ್ಲವೆಂದು ಸ್ಪಷ್ಟನೆ ನೀಡಿದ್ದರು. ಆದರೀಗ ವಿದ್ಯಾರ್ಥಿನಿ ಆತ್ಮಹತ್ಯೆಗೆ ‌ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಳಸ ಕಾಲೇಜಿನ ಓರ್ವ ಹಿಂದೂ ಯುವತಿ ಹಾಗೂ ಮೂವರು ಮುಸ್ಲಿಂ ಯುವಕರು ಕೊಪ್ಪ ಕಾಡಿನಲ್ಲಿ ಸಿಕ್ಕಿರುವ ಬಗ್ಗೆ ಫೋಟೋ ಸಹಿತ ಸಾಮಾಜಿಕ ಜಾಲತಾಣದಲ್ಲಿ ಆಗುತ್ತಿದೆ. ದೆಹಲಿ ರಿಜಿಸ್ಟ್ರೇಶನ್ ಹೊಂದಿರುವ ಸ್ವಿಫ್ಟ್ ಕಾರೊಂದರಲ್ಲಿ ಯುವತಿ ಹಾಗೂ ಮೂವರು ಯುವಕರು ಬಂದಿದ್ದರು.

ಮುಸ್ಲಿಂ ಯುವಕರ ಜೊತೆ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ತಡೆದು ಸ್ಥಳೀಯ ಯುವಕರು ಹಲ್ಲೆಗೆ ಯತ್ನಿಸಿದ್ದರು ಎನ್ನಲಾಗಿದೆ. ಫೋಟೋಸ್ ವೈರಲ್ ಆದ ವಿಚಾರವಾಗಿ ಅವಮಾನ ತಾಳಲಾರದೆ ವಿದ್ಯಾರ್ಥಿನಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಕೊಪ್ಪ ಸರ್ಕಾರಿ ಪಿಯು ಕಾಲೇಜಿನಲ್ಲಿ ನಿನ್ನೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು‌ ತಿಳಿದು ಬಂದಿದೆ. ಇನ್ನು ಇತ್ತ ಕೊಪ್ಪ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!