Saturday, June 20, 2026
spot_imgspot_img
spot_imgspot_img

ಮನೆ ಮೇಲೆ ಬಿದ್ದ ಬೃಹತ್ ಮರ; ಅಪಾಯದಿಂದ ಪಾರು..!

- Advertisement -
- Advertisement -

ಚಿಕ್ಕಮಗಳೂರು: ಗಾಳಿ- ಮಳೆ ಅಬ್ಬರ ಜೋರಾಗಿದ್ದ ಪರಿಣಾಮ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ಚಿಕ್ಕಮಗಳೂರುಕಳಸ ತಾಲೂಕಿನಲ್ಲಿ ನಡೆದಿದೆ.

ಬೆಳಿಗ್ಗೆ ನಾಲ್ಕು ಗಂಟೆಯ ಸುಮಾರಿಗೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪದ ಕಗ್ಗನಹಳ್ಳ ಗ್ರಾಮದಲ್ಲಿ ಸುರಿದ ಗಾಳಿ ಮಳೆಗೆ ಗಿರಿಜಾ ಎಂಬುವರ ಮನೆ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದ್ದು ಮನೆಯಲ್ಲಿದ್ದ ವಸ್ತುಗಳೆಲ್ಲಾ ನಾಶವಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Related news

error: Content is protected !!