Thursday, May 2, 2024
spot_imgspot_img
spot_imgspot_img

ಲಾರಿ ಹಾಗೂ ಬುಲೆಟ್ ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಮೃತ್ಯು

- Advertisement -G L Acharya panikkar
- Advertisement -

ಲಾರಿ ಹಾಗೂ ಬುಲೆಟ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಬಳಗಾರನಹಳ್ಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು-ಹೊಸೂರು ಮುಖ್ಯರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಂತೋಷ್ (28) ಎಂಬಾತನ ತಲೆಯೇ ಛಿದ್ರವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂತೋಷ್‌ ಜತೆಗೆ ಇದ್ದ ಹಿಂಬದಿ ಸವಾರ ಪರಿಕ್ಷಿತ್ ಎಂಬಾತನೂ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತೋಷ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಕ್ಸ್ಫರ್ಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

- Advertisement -

Related news

error: Content is protected !!