Friday, June 5, 2026
spot_imgspot_img
spot_imgspot_img

ಉಪ್ಪಿನಂಗಡಿ: ದಿಢೀರ್ ಬೆಂಕಿ ಕಾಣಿಸಿಕೊಂಡು ಭಾಗಶಃ ಸುಟ್ಟು ಹೋದ ಡಾಮರು ಸಾಗಾಟದ ಲಾರಿ

- Advertisement -
- Advertisement -

ಉಪ್ಪಿನಂಗಡಿ: ದಿಢೀರ್ ಬೆಂಕಿ ಕಾಣಿಸಿಕೊಂಡ ಕಾರಣ ಡಾಮರು ಸಾಗಿಸುತ್ತಿದ್ದ ಲಾರಿ ಭಾಗಶಃ ಸುಟ್ಟು ಹೋದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಲಾರಿಯು ಉದನೆ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಅರಿವಾಗುತ್ತಿದಂತೆ ಚಾಲಕ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಪಾರಾಗಿದ್ದಾರೆ. ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿಯ ಕಾರ್ಮಿಕರು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗಿದೆ.

- Advertisement -

Related news

error: Content is protected !!