Tuesday, June 9, 2026
spot_imgspot_img
spot_imgspot_img

ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಕಾರಿನಲ್ಲಿದ್ದ ನಾಲ್ವರು ಸಾವು..!

- Advertisement -
- Advertisement -

ಕಾರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ವಿಜಯಪುರ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರನ್ನು ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40), ಮೇಘರಾಜ ರಜಪೂತ (12) ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ನಾಲ್ವರು ವಿಜಯಪುರದಿಂದ ಜಮಖಂಡಿಯಲ್ಲಿರುವ ದೇವಸ್ಥಾನಕ್ಕೆ ಹೊರಟಿದ್ದರು. ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಜಮಖಂಡಿಯಿಂದ ವಿಜಯಪುರಕ್ಕೆ ಬರುತ್ತಿತ್ತು. ಅರ್ಜುಣಗಿ ಗ್ರಾಮದ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!