Friday, June 5, 2026
spot_imgspot_img
spot_imgspot_img

ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ; 30 ಟನ್ ಅಕ್ಕಿ ಭಸ್ಮ..!

- Advertisement -
- Advertisement -

ಬಾಗಲಕೋಟೆ: ನಡು ರಸ್ತೆಯಲ್ಲೇ ಅಕ್ಕಿ ಲಾರಿ ಹೊತ್ತಿ ಉರಿದ ಘಟನೆ ಮುಧೋಳ ತಾಲೂಕಿನ ಲೋಕಾಪುರ ಸಮೀಪದ ದಿ ವಿಲೇಜ್ ಹೋಟೆಲ್ ಬಳಿ ನಡೆದಿದೆ.

ಗಂಗಾವತಿಯಿಂದ ಕೊಲ್ಲಾಪುರಕ್ಕೆ ಸುಮಾರು 30 ಟನ್ ಅಕ್ಕಿ ತುಂಬಿಕೊಂಡು ಹೊರಟಿದ್ದ ಲಾರಿ ರಾಜ್ಯ ಹೆದ್ದಾರಿ ಮಧ್ಯದಲ್ಲೇ ಬೆಂಕಿಗಾಹುತಿಯಾಗಿದೆ.

ಟಯರ್ ಬ್ಲಾಸ್ಟ್ ಹಿನ್ನೆಲೆ ಲಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿ ಹತ್ತಿದ ಕೂಡಲೇ ಲಾರಿಯಿಂದ ಕೆಳಗಿಳಿದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಮುಧೋಳ ತಾಲೂಕಿನ ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!