Sunday, June 14, 2026
spot_imgspot_img
spot_imgspot_img

ಬೈಕ್ ಗೆ ಲಾರಿ ಡಿಕ್ಕಿ; ಸವಾರ ಮೃತ್ಯು..!

- Advertisement -
- Advertisement -

ಬೈಕ್ ಗೆ ಲಾರಿ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರವಾರದ ಧ್ಯಭಾಗದ ಹಬ್ಬುವಾಡ
ರಸ್ತೆಯಲ್ಲಿ ನಡೆದಿದೆ.

ಮೃತಪಟ್ಟ ಯುವಕ ಶಿಕ್ಷಕ ಉಮೇಶ್ ಗುನಗಿ (50) ಎಂದು ಗುರುತಿಸಲಾಗಿದೆ.

ಇವರು ತನ್ನ ತಂದೆಯನ್ನು ಚಿಕಿತ್ಸೆಗಾಗಿ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಬಳಿಕ ದೇವಳಮಕ್ಕಿ ಶಾಲೆ ತೆರಳುತ್ತಿದ್ದರು. ಈ ವೇಳೆ ಅತೀವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದ ಲಾರಿ ಚಾಲಕ, ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತರ ಕಡೆಯವರು, ಸಾರ್ವಜನಿಕರು ಅವೈಜ್ಞಾನಿಕವಾಗಿ ನಡೆಯುತ್ತಿರುವ ರಸ್ತೆ ಕಾಮಗಾರಿಯೇ ಅಪಘಾತಕ್ಕೆ ಕಾರಣ ಎಂದು ಆಕ್ರೋಶ ಹೊರಹಾಕಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಮಾಡುತ್ತಿದ್ದಾರೆ. ಟ್ರಾಫಿಕ್ ಪೊಲೀಸರು ಅಪಘಾತದ ವಿವರ ಪಡೆದು ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!