Wednesday, July 22, 2026
spot_imgspot_img
spot_imgspot_img

ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಅತ್ತೆ ಸಾವು

- Advertisement -
- Advertisement -

ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅತ್ತೆ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ.

ನೆಲಮಂಗಲ ಟೌನ್ ನಿವಾಸಿ ಬೀರಮ್ಮ(64) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೊಸೆ ಮಮತಾಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಸಂಬಂಧಿಕರ ಮನೆಯಿಂದ ಹಿಂದಿರುಗುವಾಗ ಅಪಘಡ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!